ಪೂಜೆಯುಳ್ಳನ್ನಬರ ಲಿಂಗವ ಹಾಡಿದೆ ಮಾಟವುಳ್ಳನ್ನಬರ ಜಂಗಮವ ಹಾಡಿದೆ ಜಿಹ್ವೆಯುಳ್ಳನ್ನಬರ ಪ್ರಸಾದವ ಹಾಡಿದೆ. ಈ ತ್ರಿವಿಧ ನಾಸ್ತಿಯಾದ ಬಳಿಕ ಎನ್ನ ನಾ ಹಾಡಿಕೊಂಡೆ ಕಾಣಾ ಕೂಡಲಸಂಗಮದೇವಾ.