ಹುಟ್ಟಿದ ಮಕ್ಕಳೆಲ್ಲ ಅರ್ಥ ಪ್ರಾಣ ಅಭಿಮಾನಕ್ಕೆ ಒಡೆಯರಾದ ಪರಿಯ ನೋಡಾ. ಅಟ್ಟ ಅಡಿಗೆಯ ವಿಷವನು ನಿಮಗೆ ಕೊಟ್ಟಲ್ಲದೆ ಉಣ್ಣೆನೆಂಬ ಭಾಷೆ ! ಕೂಡಲಸಂಗಮದೇವಯ್ಯಾ ನಿಮಗೆಂದಟ್ಟಡಿಗೆಯ ನೀಡ ಕಲಿಸಿದಾತ ಕೆಂಭಾವಿಯ ಭೋಗಯ್ಯ.