ನಿಮ್ಮ ನೋಟವನಂತಸುಖ ನಿಮ್ಮ ಕೂಟ ಪರಮಸುಖ. ಅವಟುಕೋಟಿ ರೋಮಂಗಳು ಕಂಗಳಾಗಿ ನೋಡುತ್ತಿದ್ದೆನು. ಕೂಡಲಸಂಗಮದೇವಯ್ಯಾ ನಿಮ್ಮ ನೋಡಿ ನೋಡಿ ಮನದಲ್ಲಿ ರತಿಹುಟ್ಟಿ ನಿಮಿರ್ದವೆನ್ನ ಕಳೆಗಳು. 491