ಎನ್ನವರೆನಗೊಲಿದು ಹೊನ್ನಶೂಲವನಿಕ್ಕಿದರಯ್ಯಾ. ಅಹಂಕಾರಪೂರಾಯ ಘಾಯದಲ್ಲಿ ಆನೆಂತು ಬದುಕುವೆನೆಂತು ಜೀವಿಸುವೆ ಜಂಗಮವಾಗಿ ಬಂದು ಜರೆದು ಸೂಲವನಿಳುಹಿ ಪ್ರಸಾದದ ಮದ್ದನಿಕ್ಕಿ ಸಲಹು ಕೂಡಲಸಂಗಮದೇವಾ.