ಮುಂಡೆಯ ಬೋಳಿಸಿಕೊಂಡು ಗಂಡುದೊತ್ತುವೊಕ್ಕೆನಯ್ಯಾ. ಲಜ್ಜೆಗೆಟ್ಟಾದಡೂ ಲಿಂಗವನೊಲಿಸುವೆ ನಾಣುಗೆಟ್ಟಾದಡೂ ಲಿಂಗವನೊಲಿಸುವೆ ಕೆಲದ ಸಂಸಾರಿಗಳು ನಗುತಿರ್ದಡಿರಲಿ ಕೂಡಲಸಂಗಮದೇವಾ ಶರಣಗತಿವೊಕ್ಕೆನಯ್ಯಾ. 497