ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು. ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು. ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು. ಚೆನ್ನಮಲ್ಲಿಕಾರ್ಜುನಯ್ಯಾ ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.