Pages(key to [[Help:Page Status{{!}}Page Status]])
ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ. ಅರ್ಥವ ಕೊಡುವವರಿಂಗೆ ಪಾಷಾಣವೆಸೆವ ಲೋಕ. ಹೆಣ್ಣು ಹೊನ್ನು ಮಣ್ಣು ಮೂರನೂ ಕಣ್ಣಿನಲಿ ನೋಡಿ ಕಿವಿಯಲಿ ಕೇಳಿ ಕೈಯಲಿ ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತ್ತು. ತನ್ನನಿತ್ತು ತುಷ್ಟಿವಡೆವರನೆನಗೆ ತೋರಾ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.