ಮುಂಗೈಯಲ್ಲಿ ವೀರಗಂಕಣವಿಕ್ಕಿ ಮುಂಗಾಲಲ್ಲಿ ತೊಡರುಬಾವುಲಿಯ ಕಟ್ಟಿದೆ. ಗಂಡುಡಿಗೆಯನುಟ್ಟೆನೆಂಬ ಮಾತಿನ ಬಿರಿದ ನುಂಗಿದೆನು. ಚೆನ್ನಮಲ್ಲಿಕಾರ್ಜುನಾ ನಿಮ್ಮಾಣೆಗೆ ಊಣೆಯವ ತಂದೆನಾದಡೆ ನಿಮ್ಮ ತೊತ್ತಿನ ಮಗಳಲ್ಲಯ್ಯಾ.