ಭಾವಕ್ಕೆ ಪೂಜ್ಯನಲ್ಲ ಬಹಿರಂಗದೊಳಗಡಗಿತ್ತೆಂದಡೆ ಕ್ರಿಯಾಶಬ್ದನಲ್ಲ. ಅರಿವಿನೊಳಗಡಗಿತ್ತೆಂದಡೆ ಮತಿಗೆ ಹವಣಲ್ಲ. ಭಾವ ನಿರ್ಭಾವ ನಿಶ್ಶೂನ್ಯವನು ಕಾಬ ಪರಿಯಿನ್ನೆಂತು ಹೇಳಾ? ಅದ ಕಂಡು ತನ್ನೊಳಗಿಂಬಿಟ್ಟುಕೊಂಬ ಪರಿಯೆಂತು ಹೇಳಾ ನಮ್ಮ ಗುಹೇಶ್ವರಲಿಂಗದಲ್ಲಿ ಸಂಗನಬಸವಣ್ಣಾ ?