ಅಚ್ಚ ಶರಣರು ನಿಮ್ಮ ನಿಚ್ಚ ನೆನೆವರು

ವಿಕಿಸೋರ್ಸ್ದಿಂದ

Pages   (key to Page Status)   

ಅಚ್ಚ ಶರಣರು ನಿಮ್ಮ ನಿಚ್ಚ ನೆನೆವರು,
ಬಚ್ಚ ಬರಿಯ ಮಾತನಾಡುವೆನು.
ಒಪ್ಪಚ್ಚಿ ಅರೆಭಕ್ತಿ, ನೆನೆಯಲೀಯದು ನಿಮ್ಮ.
ಮೆಚ್ಚರು ನಿಮ್ಮವರು ಎನ್ನನು ಕೂಡಲಸಂಗಮದೇವಾ.