ವಿಷಯಕ್ಕೆ ಹೋಗು

ಆಹಾ ಮನವೆ, ಮರೆದೆಯಲ್ಲಾ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಆಹಾ ಮನವೆ
ಮರೆದೆಯಲ್ಲಾ ನಿನ್ನ ಪೂರ್ವಾಪರವ
ಘನ ಮನದೊಳಡಗಿ
ಆ ಮನ ಲಿಂಗದೊಳಡಗಿ
ಆ ಲಿಂಗವೆನ್ನ ಕರಸ್ಥಲಕ್ಕೆ ಬಂದ ಬಳಿಕ ಅಳಿಯಿತ್ತು ಅಗಲಿತ್ತು ಎಂಬ ಭಾವಭ್ರಾಂತಿ ಇದೇನೊ ? ಜನನವಿಲ್ಲದ ಘನಕ್ಕೆ ಮರಣವುಂಟೆ ? ತೆರಹಿಲ್ಲದ ನಿಜವು ತನ್ನಲ್ಲಿ ತಾನು ವೇದ್ಯವಾಗಿಪ್ಪುದಲ್ಲದೆ ಇದಿರಿಟ್ಟು ತೋರದೆಂಬ ಅಜ್ಞಾನವಿದೇನೊ ? `ನೀ' `ನಾ' ಎಂಬುದು ಮಾದು. `ತಾನೆ' ಆಗೆ ಸಾಧ್ಯವಾಯಿತ್ತು ! ಇದೇನೆಂಬೆ ಗುಹೇಶ್ವರಾ.