ಅದ್ವೈತನ ಕರಸ್ಥಲದೊಳಗೆ ಅನಂತನೆಂಬ ಗಿಳಿ ಮೂರ್ತಗೊಂಡು ಅತೀತ ಅನಾಗತ ವರ್ತಮಾನವೆಂಬ ಕೊರೆಕೂಳನುಂಡು ಓದಿತ್ತು ಅಗಣಿತ ಪುರಾಣ(ವ) ಅನಾಮಯ ಶಾಸ್ತ್ರವನು ಅನುಪಮ ವೇದವೆಂದು._ ನಿಃಸ್ಥಲವ ಸ್ಥಲವಿಡಲು ನಿರ್ಮಳಾತ್ಮಂಗೆ ಇಹವಿಲ್ಲ ಪರವಿಲ್ಲ ! ಆದಿ ಮಧ್ಯಾಂತ ನಿರಾಳ ಗುಹೇಶ್ವರನ ಅನುಭವಿಗೆ ಸರ್ವಾಂಗ ಲಿಂಗವು !