ಕುಲದೊಳಗೆ ಹುಟ್ಟಿ ಕುಲವ ಬೆರಸದೆ ತಮ್ಮ ನಿಲವ ಬಲಿದಿಪ್ಪವರು ಇನ್ನಾರು ಹೇಳಾ ? ಹಬ್ಬಿದ ಮೂರು ಬೆಟ್ಟಕ್ಕೆ ತನ್ನ ಮನವ ಹಬ್ಬಲೀಯದೆ ಲಿಂಗ ಜಂಗಮಕ್ಕೆ ಸವೆಸಿ ಸ್ವಯಲಿಂಗವಪ್ಪರಿನ್ನಾರು ಹೇಳಾ ? ಸ್ವಯೋ ಲಿಂಗ ಸ್ವಯೋ ಶರಣ ಸ್ವಯೋ ಭೋಗವೆಂದುದಾಗಿ ಗುಹೇಶ್ವರಾ_ನಿಮ್ಮ ಶರಣ ಸಂಗನಬಸವಣ್ಣಂಗೆ ನಮೋ ನಮೋ ಎಂಬೆನು.