ಕರ್ತನನರಿಯದವನು ವಿಪ್ರನಾದಡೇನು ! ಚತುರ್ವೇದಿಯಾದಡೇನು ಭುಕ್ತಿಕಾರಣ ಲೋಕದ ಇಚ್ಛೆಗೆ ನುಡಿದು ನಡೆವರಯ್ಯಾ ! ಭವಿಮಾಡಿದ ಪಾಕವ ತಂದು ಲಿಂಗಕ್ಕರ್ಪಿಸುವ ಕಷ್ಟರ ಕಂಡು ನಾಚಿತ್ತೆನ್ನ ಮನವು ಕೂಡಲಸಂಗನ ಶರಣರ ಒಕ್ಕುದ ಕೊಂಡು ಅನ್ಯವನಾಚರಿಸಿದಡೆ ತಪ್ಪದು ಸೂಕರ ಶುಚಿರ್ಭೂತತೆಯ ಪ್ರಾಣಿಯಂತೆ.