ಕಂದಿದೆನಯ್ಯಾ ಎನ್ನ ನೋಡುವರಿಲ್ಲದೆ ಕುಂದಿದೆನಯ್ಯಾ ಎನ್ನ ನುಡಿಸುವರಿಲ್ಲದೆ ಬಡವಾದೆನಯ್ಯಾ ಎನ್ನ ತನು ಮನ ಧನವ ಬೇಡುವರಿಲ್ಲದೆ. ಕಾಡುವ ಬೇಡುವ ಶರಣರ ತಂದು ಕಾಡಿಸು ಬೇಡಿಸು ಕೂಡಲಸಂಗಮದೇವಾ. 432