ವಿಷಯಕ್ಕೆ ಹೋಗು

ಹೃದಯದೊಳಿಪ್ಪ ಮಹಾಲಿಂಗಜ್ಯೋತಿಯ ಬೆಳಗು,

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಹೃದಯದೊಳಿಪ್ಪ ಮಹಾಲಿಂಗಜ್ಯೋತಿಯ ಬೆಳಗು
ಪಂಚೇಂದ್ರಿಯಂಗಳಲ್ಲಿ ಪ್ರಭಾವಿಸಿ ತೋರುವ ಬೆಳಗು
ಒಂದೆ ಕಾಣಿ ಭೋ. ಒಂದು ಮೂರಾಗಿ
ಮೂರು ತಾನಾರಾಗಿ ಆರು ಮೂವತ್ತಾರಾಗಿ ಮೂವತ್ತಾರು ಇನ್ನೂರುಹದಿನಾರಾಗಿ
ಬೇರುವರಿದು ವಿಸ್ತಾರವ ಪಡೆದವಲ್ಲಾ ! ವಿಶ್ವಾಸದಿ ಬೆಳಗುವ ಬ್ರಹ್ಮಕ್ಕೂ ಗಣಿತವುಂಟೆ ? ಅಗಣಿತವೆಂದು ಅಗೋಚರವೆಂದು ಹೇಳುವರಲ್ಲದೆ
ದೃಶ್ಯವಾಗಿ ಕಾಬವರುಂಟೆ ? ದೃಗುದ್ಯಶ್ಯವಲ್ಲ ಮಹಾದಾನಿ ಕೂಡಲಚೆನ್ನಸಂಗಮದೇವ.