ವಿಷಯಕ್ಕೆ ಹೋಗು

ವೇದವನೋದಿ ಹೊನಲಲ್ಲಿ ಹೋದ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ವೇದವನೋದಿ ಹೊನಲಲ್ಲಿ ಹೋದ ದ್ವಿಜರು
ಕೆಟ್ಟ ಕೇಡಿಂಗೆ ಕಡೆಯಿಲ್ಲ. ಅದು ಹೇಗೆಂದಡೆ:ಹೇಮದಾಸೆಗೆ ಒಕ್ಕಲಿಗಂಗೆ ದತ್ತಪುತ್ರನಾಗೆಂದು ಹೇಳಿತ್ತೆ ವೇದವು ? ಕೊರಡಿನ ಮೇಲೆ ಕುಳಿತು ತುತ್ತು ಗದ್ಯಾಣವ ನುಂಗಿ ಸೀಮೆಯಹೊರವಡಿಸಿಕೊಳ್ಳೆಂದು ಹೇಳಿತ್ತೆವೇದ? ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಹೊನ್ನಕಪಿಲೆಯ ಕೊಂದು ನರಕಕ್ಕಿಳಿಯ ಹೇಳಿತ್ತೆವೇದ? `ಅಹಿಂಸಾ ಪರಮೋ ಧರ್ಮಃ' ಎಂದೋದಿ
ಅಸುರಭೋಜನಕ್ಕೆ ಅಂಗವಿಸಿ ಕರ್ಮವ ಮಾಡಿ ಹೋತ ಕೊಂದು ತಿಂಬುದು ಪಾತಕವಲ್ಲವೆ ? `ಪರಮೋ ಧರ್ಮಃ ಹಿರಣ್ಯಗರ್ಭಃ' ಎಂದು ಹೊನ್ನ ಕಪಿಲೆಯಂ ಮಾಡಿ ಕಡಿದು ಹಂಚಿಕೊಂಬುದು ಚಾಂಡಾಲವಲ್ಲವೆ ? ಹೊಲೆಯನಂತೆ ಹುಲುವೆಣನ ಸುಟ್ಟು ಹೊರಸಿನ ಮೇಲೆ ಹತವಾದ ಕಳಗ ಹತ್ತಿದ ಹಸುವಿನ ಉತ್ಕ್ರಾಂತಿಯ ಕಾನನದಲ್ಲಿ ಕೂಳು ಭೋಜನವನುಂಡು
ಲೋಕೋಪಚಾರಕ್ಕೆ ಒಳಗಾಗಿ ಪಾಪಕರ್ಮವ ಮಾಡಿ ಸಲ್ಲದೆ ಹೋದರು ಶಿವನಲ್ಲಿಗೆ. ಕೂಡಲಚೆನ್ನಸಂಗಮದೇವ ಶಿವಭಕ್ತಂಗೊಲಿದ ಕಾರಣ ಕಂಚಿಯ ಏಳು ಕೇರಿಯ ಕೈಲಾಸಕ್ಕೊಯ್ದ.