ಭಕ್ತರ ಹೆಚ್ಚು ಕುಂದು ಜಂಗಮದ ಹೆಚ್ಚು ಕುಂದೆಂಬುದನರಿಯಾ ಪ್ರಭುವೆ ? ನಿಮ್ಮ ಪ್ರಾಣವೆ ಬಸವಣ್ಣನ ಪ್ರಾಣ
ಬಸವಣ್ಣನ ಪ್ರಾಣವೆ ನಿಮ್ಮ ಪ್ರಾಣ ನಿಮ್ಮ ಕಾಯವೆ ಬಸವಣ್ಣನ ಕಾಯ
ಬಸವಣ್ಣನ ಕಾಯವೆ ನಿಮ್ಮ ಕಾಯ. ನೀವಿಲ್ಲದಿರೆ ಬಸವಣ್ಣನಿಲ್ಲ
ಬಸವಣ್ಣನಿಲ್ಲದಿರೆ ನೀವಿಲ್ಲ. ಇಂತಿದನೊಂದು ಬಿಚ್ಚಿ ಬೇರೆ ಮಾಡಬಾರದೆಂಬುದನರಿದು ಮತ್ತೆ ಬರಿದೆ ಮುನಿವರೆ ಬಲ್ಲವರು ? ನಡೆವ ವಾರುವ ಮುಗ್ಗಿದಡೆ ನಡೆಸಿಕೊಂಬುದಲ್ಲದೆ ಮಿಡಿ ಹರಿಯೆ ಹೊಯ್ದವರುಂಟೆ ಲೋಕದೊಳಗೆ ? ಮರಹಿಂದ ಬಂದ ಅವಗುಣವ ಸಂಪಾದಿಸದೆ ಜಿಜಯಂಗೈಯ್ವುದಯ್ಯಾ ನಿಮ್ಮ ಗೃಹಕ್ಕೆ ಕೂಡಲಚೆನ್ನಸಂಗಮದೇವಾ
ನಿಮ್ಮ ಶರಣ ಬಸವಣ್ಣನಾರೆಂಬುದ ನೀನೊಮ್ಮೆ ತಿಳಿದು ನೋಡಾ ಪ್ರಭುವೆ.