ವಿಷಯಕ್ಕೆ ಹೋಗು

ಇಷ್ಟಲಿಂಗ ಮಾತ ಪ್ರಾಣಲಿಂಗ

ವಿಕಿಸೋರ್ಸ್ದಿಂದ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಇಷ್ಟಲಿಂಗ ಪ್ರಾಣಲಿಂಗ ಒಂದೆಯೆಂದರಿಯದೆ ಬ್ಥಿನ್ನವಿಟ್ಟು ನುಡಿವ ಭ್ರಾಂತರ ಮಾತ ಕೇಳಲಾಗದು. ಅದೇನು ಕಾರಣವೆಂದೊಡೆ : ತಿಳಿದುಪ್ಪ ಗಟ್ಟಿಗೊಂಡು ಹೆರೆದುಪ್ಪವಾದಂತೆ
ನಿರಾಕಾರ ಪರಬ್ರಹ್ಮವ ಸಾಕಾರಗೊಳಿಸಿ
ಶ್ರೀಗುರುಸ್ವಾಮಿ ಕರುಣಿಸಿ ಕರಸ್ಥಲಕ್ಕೆ ಇಷ್ಟಲಿಂಗವೆನಿಸಿ ಕೊಟ್ಟಬಳಿಕ
ಆ ಲಿಂಗದಲ್ಲಿ ನಿಷ್ಠೆ ಬಲಿಯಲು ಬಾಹ್ಯ ಕರಣಂಗಳು ತರಹರವಾಗಿ
ಆ ಲಿಂಗದ ಚಿತ್‍ಕಳೆ ದೃಷ್ಟಿಸೂತ್ರದಿಂದೆ ತನ್ನ ಅಂತರಂಗಕ್ಕೆ ವೇದ್ಥಿಸಿ ಪ್ರಾಣಲಿಂಗವೆನಿಸುವುದು. ಸ್ಫಟಿಕದ ಘಟದಲ್ಲಿರಿಸಿದ ಜ್ಯೋತಿಯಂತೆ ಒಳಹೊರಗೆ ತೋರುತಿರ್ಪುದು ಒಂದೇ ಲಿಂಗವೆಂದರಿಯದೆ
ಭ್ರಾಂತಿಜ್ಞಾನದಿಂದೆ ಅಂತರಂಗದಲ್ಲಿ ಬೇರೆ ಪ್ರಾಣಲಿಂಗವುಂಟೆಂದು ಇಷ್ಟಲಿಂಗದಲ್ಲಿ ಅವಿಶ್ವಾಸಮಾಡುವ ಭ್ರಷ್ಟಭವಿಗಳ ಮುಖವ ನೋಡಲಾಗದಯ್ಯ ಅಖಂಡೇಶ್ವರಾ.