ವಿಷಯಕ್ಕೆ ಹೋಗು

ಭಕ್ತನೆದ್ದು ಭವಿಯ ಮುಖವ

ವಿಕಿಸೋರ್ಸ್ದಿಂದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭಕ್ತನೆದ್ದು ಭವಿಯ ಮುಖವ ಕಂಡರೆ
gõ್ಞರವ ನರಕವೆಂಬರು. ಭಕ್ತನಾವನು ? ಭವಿಯಾವನು ? ಬಲ್ಲರೆ ಹೇಳಿ
ಅರಿಯದಿದ್ದರೆ ಕೇಳಿ. ಕಾಮ ಒಂದನೆಯ ಭವಿ
ಕ್ರೋಧ ಎರಡನೆಯ ಭವಿ
ಲೋಭ ಮೂರನೆಯ ಭವಿ
ಮೋಹ ನಾಲ್ಕನೆಯ ಭವಿ
ಮದ ಐದನೆಯ ಭವಿ
ಮತ್ಸರ ಆರನೆಯ ಭವಿ. ಇಂತೀ ಷಡ್ವಿಧ ಭವಿಯ ತಮ್ಮೆದೆಯೊಳಗೆ ಇಂಬಿಟ್ಟುಕೊಂಡು
`ನಾನು ಭವಿಯ ಮೋರೆಯ ಕಾಣಬಾರದು
ಎಂದು ಮುಖದ ಮೇಲೆ ವಸ್ತ್ರವ ಬಾಸಣಿಸಿಕೊಂಡು ತಿರುಗುವ ಕುನ್ನಿಗಳ ಮೆಚ್ಚುವನೆ ಕೂಡಲಚೆನ್ನಸಂಗಮದೇವ ?