ಮಾಡಿದೆನೆಂಬುದು ಮನದಲ್ಲಿ ಹೊಳೆದಡೆ ಏಡಿಸಿ ಕಾಡಿತ್ತು ಶಿವನ ಡಂಗುರ ಮಾಡಿದೆನೆನ್ನದಿರಾ ಲಿಂಗಕ್ಕೆ ಮಾಡಿದೆನೆನ್ನದಿರಾ ಜಂಗಮಕ್ಕೆ ಮಾಡಿದೆನೆಂಬುದು ಮನದಲಿಲದಿದ್ದಡೆ ಬೇಡಿತ್ತನೀವನು ಕೂಡಲಸಂಗಮದೇವ. 234