ಅಂದಾದಿಬಿಂದುವಿಲ್ಲದಂದು ಅಂದಾ ಜೀವನೆಲ್ಲಿಪ್ಪುದೊ ? ಪಿಂಡ ರೂಪಿಸುವಲ್ಲಿ ಆ ಜೀವ ಬಂದು ಪರಿಯೆಂತುಟೊ ? ಇದನರಿದಡೆ ಗುರುವೆಂಬೆ ಲಿಂಗವೆಂಬೆ ಜಂಗಮವೆಂಬೆ ಅಲ್ಲದಿದ್ದಡೆ ನರನೆಂಬೆ ಕಾಣಾ ಗುಹೇಶ್ವರಾ