ಅಯ್ಯ ತನುತ್ರಯಂಗಳು, ಜೀವತ್ರಯಂಗಳು,

ವಿಕಿಸೋರ್ಸ್ದಿಂದ



Pages   (key to Page Status)   


ಅಯ್ಯ ತನುತ್ರಯಂಗಳು
ಜೀವತ್ರಯಂಗಳು
ಆತ್ಮತ್ರಯಂಗಳು
ಅವಸ್ಥಾತ್ರಯಂಗಳು
ಗುಣತ್ರಯಂಗಳು
ಮನತ್ರಯಂಗಳು
ತಾಪತ್ರಯಂಗಳು
ಕಾಲತ್ರಯಂಗಳು
ಕರ್ಮತ್ರಯಂಗಳು
ಭಾವತ್ರಯಂಗಳು
ಮಲತ್ರಯಂಗಳು
ಕರಣತ್ರಯಂಗಳು ಮೊದಲಾದ ಪ್ರವೃತ್ತಿಮಾರ್ಗವನುಳಿದು
ಹಿಂದೆ ಹೇಳಿದ ಸದ್ಭಕ್ತ_ಮಹೇಶ್ವರಸ್ಥಲದಲ್ಲಿ ನಿಂದು_ ಅಷ್ಟಾವಧಾನ ಅವಿರಳಾನಂದಮೂರ್ತಿಯಾಗಿ ಪ್ರಕಾಶಿಸುವ ನಿಜಪ್ರಸಾದಿಯಂತರಂಗದಲ್ಲಿ ಚಿತ್ಘನ ಸ್ವರೂಪವಲೀಲೆಯಿಂ ಅಂತರಂಗದಲ್ಲಿ ಅಂಗತತ್ತ್ವ
ಲಿಂಗತತ್ತ್ವ
ಶಿವತತ್ತ್ವ
ಪರತತ್ತ್ವ ಮೊದಲಾದ ಸಮಸ್ತ ತತ್ತ್ವಂಗಳನೊಳಕೊಂಡು
ಹದಿನಾರು ಸ್ಥಲಂಗಳ ಗರ್ಭೀಕರಿಸಿಕೊಂಡು
ನಾಲ್ಕು ಸಾವಿರದ ಮುನ್ನೂರಿಪ್ಪತ್ತು ಮಂತ್ರಮಾಲಿಕೆಗಳ ಪಿಡಿದುಕೊಂಡು ಇಪ್ಪತ್ತುನಾಲ್ಕು ಸಕೀಲಗರ್ಭದಿಂ ಪಾದೋದಕ ಪ್ರಸಾದವ ಕೊಂಡ ಅಂಗ_ಮನ_ಪ್ರಾಣ_ಭಾವ_ಇಂದ್ರಿಯಂಗಳೆಲ್ಲ ಪಾದೋದಕ ಪ್ರಸಾದಮಯವೆಂಬ ಹರಗುರುವಾಕ್ಯದಿಂ ಚಿನ್ನಬಣ್ಣ ಪ್ರಕಾಶದ ಹಾಂಗೆ ಭಿನ್ನ ಭಾವವಿಲ್ಲದೆ ಏಕರೂಪಿನಿಂದ ನಿರೀಕ್ಷಣಾಮೂರ್ತಿ ಶಿವಲಿಂಗವಾಗಿ ನೆಲಸಿರ್ಪುದು ನೋಡ ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.