ಅಭ್ಯಾಸವ ಮಾಡುವ ಕೋಲಿಂಗೆ

ವಿಕಿಸೋರ್ಸ್ದಿಂದ



Pages   (key to Page Status)   


ಅಭ್ಯಾಸವ ಮಾಡುವ ಕೋಲಿಂಗೆ ಶರಣೆಂದಡೆ ಮುಂದಣ ಬವರಕ್ಕಾಗಬಲ್ಲುದೆ ಅಯ್ಯಾ ? ಇಷ್ಟಲಿಂಗವೆಂದು ಮುಟ್ಟಿ ಪೂಜಿಸುತ್ತಿದ್ದಡೆ ಮುಂದಣ ಶಂಕೆಗಿನ್ನೆಂತೊ ? ಲಿಂಗವೆಂದಡೆ ನಿಸ್ಸಂಗದಲ್ಲಿದೆ
ಜಂಗಮವೆಂದಡೆ ಆಶ್ರಯದಲ್ಲಿದೆ ಈ ಲಿಂಗಜಂಗಮವನೊಂದೆಂದಡೆ ಮುಂದಣ ಲಯಕ್ಕಿನ್ನೆಂತೊ ? ಎಲೆ ಗುಹೇಶ್ವರಾ
ನಿಮ್ಮ ಶರಣ ಚತುರ್ವಿಧಪದವಿಗಳಿಗೆ ಹೊರಗು.