ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ, ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ ! ಕರುಣಾಕರ, ಅಭಯಕರ, ವರದ, ನೀ ಕರುಣಿಸಯ್ಯಾ. ಸಂಸಾರಬಂಧನವನು ಮಾಣಿಸಿ, ಎನಗೆ ಕೃಪೆಯ ಮಾಡಿ, ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು, ಭಕ್ತಜನಮನೋವಲ್ಲ ಕೂಡಲಸಂಗಮದೇವಾ. 69
ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ
ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ ! ಕರುಣಾಕರ
ಅಭಯಕರ
ವರದ
ನೀ ಕರುಣಿಸಯ್ಯಾ. ಸಂಸಾರಬಂಧನವನು ಮಾಣಿಸಿ
ಎನಗೆ ಕೃಪೆಯ ಮಾಡಿ
ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು
ಭಕ್ತಜನಮನೋವಲ್ಲ ಕೂಡಲಸಂಗಮದೇವಾ. 69