ಮಹಾಲಿಂಗದ ಸ್ಥಾನಂಗಳು ಮಹಾಲಿಂಗದ ಹೆಸರಲ್ಲದೆ ಲಿಂಗ ಬೇರೆ ರೂಪುನಿರೂಪನಲ್ಲ ಲಿಂಗ ಬೇರೆ ಕಾಯಸಂಬಂಧಿಯಲ್ಲ ಲಿಂಗ ಬೇರೆ ಮಹಾಘನದಿಂದತ್ತತ್ತಲೆ. ಕೂಡಲಸಂಗಮದೇವರ ನಿಲವು ಆರಿಗೆಯೂ ಅಳವಡದು.