ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯಾ ಒರೆಗೆ ಬಣ್ಣಕ್ಕೆ ತಂದೆನ್ನ ಪುಟವನಿಕ್ಕಿ ನೋಡಯ್ಯಾ ಕಡಿಹಕ್ಕೆ ಬಡಿಹಕ್ಕೆ ತಂದೆನ್ನ ಕಡೆಯಾಣಿಯ ಮಾಡಿ ನಿಮ್ಮ ಶರಣರ ಪಾದಕ್ಕೆ ತೊಡಿಗೆಯ ಮಾಡಿ ಸಲಹು ಕೂಡಲಸಂಗಮದೇವಾ. 251