ವೀರವ್ರತಿ ಭಕ್ತನೆಂದು ಹೊಗಳಿಕೊಂಬಿರಿ ಕೇಳಿರಯ್ಯಾ; ವೀರನಾದಡೆ ವೈರಿಗಳು ಮೆಚ್ಚಬೇಕು ವ್ರತಿಯಾದಡೆ ಅಂಗನೆಯರು ಮೆಚ್ಚಬೇಕು ಭಕ್ತನಾದಡೆ ಜಂಗಮವೆ ಮೆಚ್ಚಬೇಕು. ಈ ನುಡಿಯೊಳಗೆ ತನ್ನ ಬಗೆಯಿರೆ ಬೇಡಿದ ಪದವಿಯನೀವ ಕೂಡಲಸಂಗಮದೇವ.