ಜಂಗಮವಿರಹಿತ ಲಿಂಗಾರ್ಚನೆ :ಓಡ ಬಿಲಲೆರೆದ ಜಲದಂತೆ. ಜಂಗಮಸನ್ನಿಹಿತ ಲಿಂಗಾರ್ಚನೆ :ಇದೆ ಭಕ್ತಿಗೆ ಪಥವಯ್ಯಾ ಜಂಗಮಪ್ರಸಾದಭೋಗೋಪಭೋಗವು :ಎನಗಿದೇ ಲಿಂಗಾರ್ಚನೆ. ಬೇರೆ ಮತ್ತೊಂದನರಿದೆನಾದಡೆ ಕೂಡಲಸಂಗಮದೇವ ನರಕದಲ್ಲಿಕ್ಕುವ. 398