ವಿರಕ್ತಿ ವಿರಕ್ತಿ ಎಂಬರು

ವಿಕಿಸೋರ್ಸ್ದಿಂದ



Pages   (key to Page Status)   


ವಿರಕ್ತಿ ವಿರಕ್ತಿ ಎಂಬರು ವಿರಕ್ತಿಯ ಪರಿ ಎಂತುಂಟು ಹೇಳಿರಯ್ಯಾ. ಕಟ್ಟಿದ ಲಿಂಗವ ಕೈಯಲ್ಲಿ ಹಿಡಿದಿದ್ದರೆ ವಿರಕ್ತನೆ ? ಹುಟ್ಟು ಕೆತ್ತುವ ಡೊಂಬನಂತೆ ಬಿಟ್ಟಮಂಡೆಯ ಕೇಶವ ನುಣ್ಣಿಸಿ ಬಣ್ಣಿಸಿ
ಎಣ್ಣೆಯ ಗಂಟ ಹಾಕಿದಡೆ ವಿರಕ್ತನೆ ? ಕಟ್ಟುಹರಿದ ಪಂಜಿನಂತೆ
ಬಿಟ್ಟಮಂಡೆಯ ಕಟ್ಟದಿರ್ದಡೆ ವಿರಕ್ತನೆ ? ಹರದನಂತೆ ಹೇಸಿಯಾಗಿರ್ದಡೆ ವಿರಕ್ತನೆ ? ಮೂಗನಂತೆ ಮಾತನಾಡದಿರ್ದಡೆ ವಿರಕ್ತನೆ ? ಹೊನ್ನು ಹೆಣ್ಣು ಮಣ್ಣ ಬಿಟ್ಟು ಅಡವಿಯಾರಣ್ಯದಲ್ಲಿರ್ದಡೆ ವಿರಕ್ತನೆ ?ಅಲ್ಲ. ವಿರಕ್ತನ ಪರಿಯೆಂತೆಂದೊಡೆ ಒಡಲ ಹುಡಿಗುಟ್ಟಿ
ಮೃಡನೊಳೆಡದೆರಹಿಲ್ಲದಿರಬಲ್ಲಡೆ ವಿರಕ್ತನಪ್ಪನು. ಅಲ್ಲದಿರ್ದಡೆ ಮೈಲಾರಿ ಮಲ್ಲಿ ಗೊರವಿಯಲ್ಲವೆ ಚೆನ್ನಮಲ್ಲಿಕಾರ್ಜುನಾ ?