ಮೊರನ ಗೋಟಿಲಿ ಬಪ್ಪ ಕಿರುಕುಳದೈವಕ್ಕೆ ಕುರಿಯನಿಕ್ಕಿಹೆವೆಂದು ನಲಿನಲಿದಾಡುವರು ಕುರಿ ಸತ್ತು ಕಾವುದೆ ಹರ ಮುಳಿದವರ ಕುರಿ ಬೇಡ ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು ನಮ್ಮ ಕೂಡಲಸಂಗಮದೇವನ.