Pages(key to [[Help:Page Status{{!}}Page Status]])
ಮಾಡಿ ನೀಡಿ ಲಿಂಗವ ಪೂಜಿಸಿಹೆವೆಂಬವರು ನೀವೆಲ್ಲಾ ಕೇಳಿರಣ್ಣಾ: ಹಾಗದ ಕೆರಹ ಹೊರಗೆ ಕಳೆದು ದೇಗುಲಕ್ಕೆ ಹೋಗಿ ನಮಸ್ಕಾರವ ಮಾಡುವನಂತೆ ತನ್ನ ಕೆರಹಿನ ಧ್ಯಾನವಲ್ಲದೆ ದೇವರ ಧ್ಯಾನವಿಲ್ಲ. ಧನವನಿರಿಸದಿರಾ ಇರಿಸಿದಡೆ ಭವ ಬಪ್ಪುದು ತಪ್ಪುದು. ಕೂಡಸಂಗನ ಶರಣರಿಗೆ ಸವೆಸಲೇಬೇಕು. 199