ಮರದ ನೆಳಲಲಿದ್ದು ತನ್ನ ನೆಳಲನರಸಬಹುದೆ ನಿಮ್ಮ ಶರಣರ ಮುಂದೆ ನಾನೇತರ ಭಕ್ತನಯ್ಯಾ ನಿಮ್ಮ ಶರಣರ ಮುಂದೆ ನಾನೇತರ ಯುಕ್ತನಯ್ಯಾ ಆನು ಭಕ್ತನೆಂಬ ನುಡಿ ಸುಡದೆ ಕೂಡಲಸಂಗಮದೇವಾ