ಭವರೋಗವೈದ್ಯನೆಂದು ನಾ ನಿಮ್ಮ ಮರೆಹೊಕ್ಕೆ ಭಕ್ತಿದಾಯಕ ನೀನು ಕರುಣಿಸು ಲಿಂಗತಂದೆ. ಜಯ ಜಯ ಶ್ರೀ ಮಹಾದೇವ ಜಯ ಜಯ ಶ್ರೀ ಮಹಾದೇವ ಜಯ ಜಯ ಶ್ರೀ ಮಹಾದೇವ ಎನ್ನುತ್ತಿದ್ದಿತೆನ್ನ ಮನವು. ಕೂಡಲಸಂಗಮದೇವಂಗೆ ಶರಣೆಂದಿತ್ತೆನ್ನ ಮನವು. 484