ಅನುವನರಿಯದೆ
ಆದಿಯ ವಿಚಾರಿಸದೆ ಅನಾದಿಯಲ್ಲಿ ತಾನೆರೆಂಬುದ ನೋಡದೆ ಸ್ತೋತ್ರವ ಮಾಡಿ ಫಲವೇನು ? `ನಿಶ್ಶಬ್ದಂ ಬ್ರಹ್ಮ ಉಚ್ಯತೇ' ಎಂಬ ಘನವು ಹೊಗಳತೆಗೆ ಸಿಕ್ಕುವುದೆ ಎಲೆ ಮರುಳುಗಳಿರಾ ? ಅನಾದಿಯಲ್ಲಿ ಬಸವಣ್ಣನು ಏಳುನೂರೆಪ್ಪತ್ತು ಅಮರಗಣಂಗಳು ಸಹಿತ ಮತ್ರ್ಯಕ್ಕೆ ಬಂದನೊಂದು ಕಾರಣದಲ್ಲಿ. ಬಂದ ಮಣಿಹ ಪೂರೈಸಿತ್ತು_ಸಂದ ಪುರಾತರೆಲ್ಲರೂ ಕೇಳಿ
ಇಂದು ನೀವೆಲ್ಲರು ನಿಮ್ಮ ನೀವು ತಿಳಿದು ನೋಡಿ ನಿಜವನೈದುವುದು. ಇನ್ನು ನಮ್ಮ ಗುಹೇಶ್ವರಲಿಂಗಕ್ಕೆ ಸುರಾಳದ ಸುಳುಹಿಲ್ಲ.