Pages(key to [[Help:Page Status{{!}}Page Status]])
ತನ್ನಾಶ್ರಯದ ರತಿಸುಖವನು ತಾನುಂಬ ಊಟವನು ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ತನ್ನ ಲಿಂಗಕ್ಕೆ ಮಾಡುವ ನಿತ್ಯನೇಮವ ತಾ ಮಾಡಬೇಕಲ್ಲದೆ ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ಕೆಮ್ಮನೆ ಉಪಚಾರಕ್ಕೆ ಮಾಡುವರಲ್ಲದೆ ನಿಮ್ಮನೆತ್ತಬಲ್ಲರು ಕೂಡಲಸಂಗಮದೇವಾ. 183