ಅಂಗವಿಡಿದಂಗಿಯನೇನೆಂಬೆ ? ಆರನೊಳಕೊಂಡ ಅನುಪಮನು ನೋಡಾ ! ಮೂರರ ಹೊಲಿಗೆಯ ಬಿಚ್ಚಿ
ಎಂಟಾತ್ಮ ಹರಿಗಳ ತನ್ನಿಚ್ಛೆಯೊಳ್ ನಿಲಿಸಿದ ನಿಜಸುಖಿಯು ನೋಡಾ. ತತ್ತ್ವ ಮೂವತ್ತಾರ ಮೀರಿ
ಅತ್ತತ್ತವೆ ತೋರ್ಪ ಆಗಮ್ಯನು ನೋಡಾ ! ನಮ್ಮ ಗುಹೇಶ್ವರನ ಶರಣ ಅಲ್ಲಯ್ಯನ ಇರವನೊಳಕೊಂಡ ಪರಮಪ್ರಸಾದಿ ಮರುಳಶಂಕರದೇವರ ನಿಲವ ಬಸವಣ್ಣನಿಂದ ಕಂಡೆ ನೋಡಾ ಸಿದ್ಧರಾಮಯ್ಯಾ.