ಕಲ್ಲ ಹೋರಿನೊಳಗೊಂದು ಕಾರ್ಯವ ಕಾಬಡೆ ಕಲ್ಲ ಬೆದಕದೆ ಕಪ್ಪೆಯ ಸೋಂಕದೆ ಅಲ್ಲಿಯ ಉದಕವ ಕುಡಿಯ ಬಲ್ಲಡೆ_ಅದು ಯೋಗ. ಬಲ್ಲಡೆ ನಿಮ್ಮಲ್ಲಿ ನೀವೆ ತಿಳಿದು ನೋಡಿರೆ. ಅರಿವ ಯೋಗಕ್ಕಿದು ಚಿಹ್ನವಯ್ಯಾ: ಕಲ್ಲು ಕಪ್ಪೆಯೊಳಗಣ ಹುಲ್ಲುರಿಯದೆ ಅಟ್ಟುಂಬಂತೆ ಗುಹೇಶ್ವರಾ.