ಇಬ್ಬರ ಮಧ್ಯದಲೊಂದು ಮಗುವು ಹುಟ್ಟಿತ್ತು. ಆ ಮಗುವಿನ ಹುಟ್ಟ ತಾಯಿಯೂ ಅರಿಯಳು ತಂದೆಯೂ ಅರಿಯನು ! ಹೆಸರಿಟ್ಟು ಕರೆದು ಜೋಗುಳವಾಡುತ್ತೈದಾರೆ. ಕೈ ಬಾಯಿಗೆ ಬಂದ ಶಿಶು ಮೈದೋರದಿದ್ದಡೆ ಕಂಡು ನಾನು ನಾಚಿದೆನು ಕಾಣಾ ಗುಹೇಶ್ವರಾ.