ಖೇಚರರಾಗಲಿ ಭೂಚರರಾಗಲಿ ಲಾಂಛನಧಾರಿಯಾಗಲಿ ಮರಣವಾರಿಗೂ ಮನ್ನಣೆಯಿಲ್ಲ! ಸನಕ ಸನಂದಾದಿಗಳಿಗೂ ಮರಣ ಮನ್ನಣೆಯಿಲ್ಲ. ಇದು ಕಾರಣ _ ಗುಹೇಶ್ವರಾ ನಿಮ್ಮ ಶರಣರು ಕಾಲನ ಬಾರಿಗೆ ಕಲ್ಪಿತರಾಗರು !