ಇಷ್ಟಲಿಂಗದಲ್ಲಿ ವಿಶ್ವಾಸ ಬಲಿದರೆ ಆಯತಲಿಂಗ. ಆ ಇಷ್ಟಲಿಂಗದಲ್ಲಿ ಭಾವಮನೋವೇದ್ಯವಾದಲ್ಲಿ ಸ್ವಾಯತಲಿಂಗ. ಆ ಇಷ್ಟಲಿಂಗದ ಭಾವ ಮನೋವೇದ್ಯವಾದ ಸುಖವು ಭಿನ್ನವಾಗಿ ತೋರದೆ
ಅನುಪಮ ಪರಿಣಾಮ ಭರಿತವಾದಲ್ಲಿ ಸನ್ನಹಿತಲಿಂಗ. ಇಂತು
ಇಷ್ಟಲಿಂಗ ಪ್ರಾಣಲಿಂಗ ತೃಪ್ತಿಯ ಭಾವಲಿಂಗಂಗಳೆಂಬ ಲಿಂಗತ್ರಯಂಗಳು
ತನುತ್ರಯಂಗಳ ಮೇಲೆ ಆಯತ ಸ್ವಾಯತ ಸನ್ನಹಿತಂಗಳಾದ ಶರಣನ ಪಂಚಭೂತಂಗಳಳಿದು ಲಿಂಗ ತತ್ವಂಗಳಾಗಿ
ಆತನ ಜೀವ ಭಾವವಳಿದು ಪರಮಾತ್ಮನೆನಿಸಿದಲ್ಲಿ ಷಡಂಗಯೋಗವಾದುದು ಕಾಣಾ ಗುಹೇಶ್ವರಾ.