ಲಿಂಗವನರಿಯದೆ ಏನನರಿದಡೆಯೂ ಫಲವಿಲ್ಲ ಲಿಂಗವನರಿದ ಬಳಿಕ ಮತ್ತೇನನರಿದಡೆಯೂ ಫಲವಿಲ್ಲ. ಸರ್ವಕಾರಣ ಲಿಂಗವಾಗಿ ಲಿಂಗವನೆ ಅರಿದರಿದು ಲಿಂಗಸಂಗವನೆ ಮಾಡುವೆ. ಸಂಗಸುಖದೊಳು ಓಲಾಡುವೆ ಗುಹೇಶ್ವರಾ.