ವಿಷಯಕ್ಕೆ ಹೋಗು

ತನ್ನನರಿಯೆನೆಂಬುದು ಅಜ್ಞಾನ ನೋಡಾ.

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ತನ್ನನರಿಯೆನೆಂಬುದು ಅಜ್ಞಾನ ನೋಡಾ. ಅರಿಯದ ಅಜ್ಞಾನವ ಅಗಳೆದು ಜ್ಞಾನವ ಕಾಣೆನೆಂಬುದು ವಿಪರೀತ ಭಾವ ನೋಡಾ ! ಎಲ್ಲವನು ತೋರುವ ಘನವನು ಎಲ್ಲಿಯೂ ಕಾಣಬಾರದು. ಕಾಣಬಾರದ ನಿಜವ ತೋರಬಾರದು
ತೋರಬಾರದ ನಿಜವ ತಿಳಿಯಬಾರದು
. ಗುಹೇಶ್ವರಲಿಂಗದಲ್ಲಿ ಬಯಕೆಯುಳ್ಳನ್ನಕ್ಕ ತವಕ ಎಡೆಗೊಂಡಿಪ್ಪ ಕಾರಣ ತಿಳುಹಲಿಲ್ಲವೆಂಬುದ ನಿನ್ನ ನೀ ತಿಳಿದು ನೋಡಾ ಸಿದ್ಧರಾಮಯ್ಯಾ.