ನಿಮ್ಮಲ್ಲಿ ಸನ್ನಹಿತನಾಗಿ ನಿಜವನರಿತು

ವಿಕಿಸೋರ್ಸ್ದಿಂದ



Pages   (key to Page Status)   


ನಿಮ್ಮಲ್ಲಿ ಸನ್ನಹಿತನಾಗಿ ನಿಜವನರಿತು ಬೆರಸಿದ ಶಿವಯೋಗಿಯ ಕಂಡಡೆ ಎನ್ನ ಮನ ಅಗಲಲಾರದಯ್ಯಾ; ಎನ್ನ ತನು ಅಪ್ಪದಿರಲಾರದಯ್ಯಾ
ಎನ್ನ ಶಬುದ ಹೊಗಳಿದಲ್ಲದೆ ಸೈರಿಸಲಾರದಯ್ಯಾ. ಗುಹೇಶ್ವರಾ ನಿಮ್ಮ ಶರಣ ಸಿದ್ಧರಾಮಯ್ಯನನಪ್ಪಿ ಸೊಪ್ಪಳಿದು ನಮೋ ನಮೋ ಎನುತಿರ್ದೆನು.