ಹುಸಿಯಿಲ್ಲದ ಗೂಡಿನೊಳಗೆ
ಹೊಸ ಬಣ್ಣದ ಹಕ್ಕಿಯ ಭಸ್ಮವ ಮಾಡಿ ಆ ಗೂಡನೆಯ್ದೆ ನುಂಗೆ
ಶಿಶು ತಾಯ ಬೆಸಲಾಗಿ
ತಾಯಿ ಶಿಶುವ ನುಂಗೆ
ಶಿಶು ಕೋಪದಿಂದ ತಾಯನೆಯ್ದೆ ನುಂಗೆ
ಹೊಸ ದೇಶದಿಂದೊಬ್ಬನಾರಯ್ಯ ಬಂದಾತ ಹೆಸರಿಲ್ಲದಂತಿಬ್ಬರನೆಯ್ದೆ ನುಂಗೆ ಬಸವ ಚನ್ನಬಸವ ಅನಿಮಿಷ ಗುಹೇಶ್ವರ ಸಹಿತ ಶಿಶುವಿನ ಕರಸ್ಥಲದಲ್ಲಿಯೆ ಸುಖಿಯಾದರು !