ಮನ ಉಂಟೆ ಮರುಳೆ ಶಿವಯೋಗಿಗೆ ? ಮತ್ತೊಂದು ಮನಮಗ್ನ ಉಂಟೆ ಶಿವಯೋಗಿಗೆ ? ಇಲ್ಲದ ಮನವ ಉಂಟೆಂದು ನುಡಿದು ಅಡಗಿಸಿದೆನೆಂಬ ಮಾತು ಮನವ ನೆಲೆಮಾಡಿ ತೋರುತ್ತದೆ. ಗುಹೇಶ್ವರನ ಅರಿದ ಶರಣಂಗೆ ತೋರಲಿಲ್ಲ ಅಡಗಲಿಲ್ಲ ಕೇಳಾ.