ಕಾಳರಕ್ಕಸಿಗೊಬ್ಬ ಮಗ ಹುಟ್ಟಿ ಕಾಯದ ರಾಶಿಯ ಮೊಗೆವುತ್ತ ಸುರಿವುತ್ತಲಿದ್ದನಯ್ಯಾ ! ಕಾಳರಕ್ಕಸಿಯ ಮೂಗು ಮೊಲೆಯ ಕೊಯ್ದು ದೇವಕನ್ನಿಕೆಯ ಮೊರೆಹೊಕ್ಕು ಬಾಯ ತುತ್ತೆಲ್ಲವನು ಉಣಲೊಲ್ಲದೆ ಕಾರಿದಡೆ ಆತನೆ ಭಕ್ತನೆಂದೆಂಬೆ ಗುಹೇಶ್ವರಾ.