ಚಿತ್ತದ ಸ್ನೇಹವ ಸಜ್ಜನಕ್ಕರ್ಪಿತವ ಮಾಡೆ; ನಟ್ಟಿದ್ದ ಬೇಟಕ್ಕೆ ತಾಗು_ತಡೆಯುಂಟೆ ಎಲೆ ಮರುಳೆ ? ಆತುರದಲ್ಲಿ ಕಳವಳಿಸಿ ವ್ಯಾಕುಳದಲ್ಲಿ ಡಾವರಿಸುತ್ತಿಪ್ಪುದೀ ಮನವು. ಈ ಮನವು ಚಿಹ್ನೆದೋರದ ಘನಕ್ಕೆ ಬೆಂಬತ್ತಿ ಬಿಡದಿರಬಲ್ಲಡೆ ತನ್ಮೂರ್ತಿ ತನ್ನಲ್ಲಿ ಗುಹೇಶ್ವರಲಿಂಗವು !