ವಿಷಯಕ್ಕೆ ಹೋಗು

ಕಾಮ ಸತ್ಯವ ತಿಂದಿತ್ತು,

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಾಮ ಸತ್ಯವ ತಿಂದಿತ್ತು
ಕ್ರೋಧ ಜ್ಞಾನವ ತಿಂದಿತ್ತು
ಲೋಭ ಧರ್ಮವ ತಿಂದಿತ್ತು
ಮೋಹ ವಿರಕ್ತಿಯ ತಿಂದಿತ್ತು
ಮದ ಭಕ್ತಿಯ ತಿಂದಿತ್ತು
ಮತ್ಸರ ಯು(ಮು ?)ಕ್ತಿಯ ತಿಂದಿತ್ತು. ಈ ಕಾಮ ಕ್ರೋಧ ಲೋಭ ಮೋಹ ಮದ ಮಾತ್ಸರ್ಯವೆಂಬ ಅರಿಷಡ್ವರ್ಗಂಗಳಿವು ನಿಮ್ಮ ನೈದಲರಿಯದೆ
ಈ ಸತ್ಯ ಜ್ಞಾನ ಧರ್ಮ ವಿರಕ್ತಿ ಭಕ್ತಿ ಯುಕ್ತಿಗಳೆಂಬ ಸದ್ವರ್ತನೆಯ
ದುರ್ವರ್ತನೆಯೆಂಬರಿಷಡುವರ್ಗಂಗಳೆಂಬ ನಾಡ ನಾಯಿಗಳೆ ತಿಂದವು. ಎನಗೆ ಸದ್ವರ್ತನೆಯಿಲ್ಲದೆ ಅಪ್ರದೇಶಿಕನಾದೆನು ಕಾಣಾ ಗುಹೇಶ್ವರಾ.