ಕರು(ರ?)ಣ ಲಿಂಗಾರ್ಚನೆಯ ಮಾಡಲೆಂದು

ವಿಕಿಸೋರ್ಸ್ದಿಂದ



Pages   (key to Page Status)   


ಕರು(ರ?)ಣ ಲಿಂಗಾರ್ಚನೆಯ ಮಾಡಲೆಂದು ಪುಷ್ಪಕ್ಕೆ ಕೈಯ ನೀಡಿದಡೆ ಆ ಪುಷ್ಪ ಕರಣದೊಳಗಡಗಿತ್ತಯ್ಯ. ಷೋಡಶ ಕಳೆ ಹದಿನಾರರೆಸಳು ವಿಕಸಿತವಾಯ್ತು. ಪುರುಷ ಪುಷ್ಪದ ಮರನು
ಅದು ಓಗರದ ಗೊಬ್ಬರವನುಣ್ಣದು
ಕಾಮದ ಕಣ್ಣಿರಿಯದು. ನಿದ್ರೆಯ ಕಪ್ಪೊತ್ತದು. ಅರುಣ ಚಂದ್ರಾದಿಗಳಿಬ್ಬರ ತೆರೆಯುಂಡು ಬೆಳೆಯದ ಪುಷ್ಪ ಲಿಂಗವೆ ಧರೆಯಾಗಿ ಬೆಳೆಯಿತ್ತು
ಆ ಪುಷ್ಪ ನೋಡಾ ! ಆ ಪುಷ್ಪವೆಂದಿಗೂ ನಿರ್ಮಾಲ್ಯವಲ್ಲೆಂದು ಗುಹೇಶ್ವರ
ನಿಮ್ಮ ಶರಣ ಪ್ರಾಣಲಿಂಗಕ್ಕೆ ಪ್ರಾಣಪೂಜೆಯ ಮಾಡಿದ.